Advertisements

ನೋವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು ಪತ್ನಿ! ಏನು ಮಾಡಿದ್ದಾರೆ ನೋಡಿ..

Cinema

ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ನೀಡಿ ಗೌರವಿಸಲಾಗಿದೆ ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಕಾವರ್ ಚಂದ್ ಡಾಕ್ಟರೇಟ್ ಪ್ರದಾನ ಮಾಡಿದರು ಪುನೀತ್ ರಾಜಕುಮಾರ್ ಅವರ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದ್ದಾರೆ ಈ ವೇಳೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕೆಲಕಾಲ ಭಾವುಕರಾಗಿದ್ದು ಕಂಡುಬಂತು ಈ ನೋವಿನಲ್ಲಿ ಕೂಡ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಾರ್ಥಕತೆ ಮೆರೆದಿದ್ದಾರೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 102ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಅವರ ಪರವಾಗಿ ಅವರ ಪತ್ನಿ ಅಶ್ವಿನಿ ಯವರು ಗೌರವ ಡಾಕ್ಟರೇಟನ್ನು ಸ್ವೀಕಾರ ಮಾಡಿದ್ದಾರೆ

Advertisements
Advertisements

ಈ ಸಮಾರಂಭದಲ್ಲಿ ಮಾತನಾಡಿದ ಆಶ್ವಿನಿ ಅವರು ಪುನೀತ್ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಪರವಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರತಿವರ್ಷ 2 ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ ಪಾರ್ವತಮ್ಮ ರಾಜಕುಮಾರ್ ಅವರ ಹೆಸರಿನಲ್ಲಿ ಬಿಸಿನೆಸ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಂಗಾರದ ಪದಕ ಮತ್ತು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಲಲಿತಕಲೆಗಳ ವಿಷಯದಲ್ಲಿ ಬಂಗಾರದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಘೋಷಣೆ ಆಯಿತು ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು ಎಂದಿದೆ ರಾಜಕುಟುಂಬ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಾಕ್ಟರ್ ರಾಘವೇಂದ್ರ ರಾಜಕುಮಾರ್ ಅವರು ಮಾತನಾಡಿ ಜೀವನ ಒಂದು ಚಕ್ರವಿದ್ದಂತೆ ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ದರು ಇಂದು ಇದೇ ವಿವಿಯಲ್ಲಿ ನನ್ನ ತಮ್ಮನಿಗೂ ಡಾಕ್ಟರೇಟ್ ಸಿಕ್ಕಿದೆ ನನಗೆ ಇದು ವೇದಿಕೆಯ ರೀತಿ ಕಾಣಿಸುತ್ತಿಲ್ಲ

ಸರಸ್ವತಿಯ ಮಂದಿರದ ತರ ಇದೆ ನಿಮ್ಮ ಕೆಲಸಗಳನ್ನು ಶ್ರದ್ಧೆಯಿಂದ ಮಾಡಿದರೆ ಪ್ರಶಸ್ತಿಗಳು ಹುಡುಕಿ ಬರುತ್ತವೆ ಅಂತ ಪುನೀತ್ ಯಾವಾಗಲೂ ಹೇಳುತ್ತಿದ್ದ ಇನ್ನಾರು ಸ್ವರ್ಗ ಸೇರದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ ಈ ಗೌರವ ಡಾಕ್ಟರೇಟ್ ನಮ್ಮ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಕೆಲಸಗಳನ್ನು ಮುಂದುವರಿಸುತ್ತೇವೆ ಎಂದಿದ್ದಾರೆ ಗೌರವ ಡಾಕ್ಟರೇಟ್ ಸ್ವೀಕರಿಸಿದ ನಂತರ ಅದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅಶ್ವಿನಿ ಪುನೀತ್ ಕುಮಾರ್ ಕುಟುಂಬ ಗೆಳೆಯರು ಹಾಗೂ ಅವರ ಅಭಿಮಾನಿಗಳ ಪರವಾಗಿ ಪುನೀತ್ ರಾಜಕುಮಾರ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಖುಷಿಯಾಗಿದೆ ಈ ಗೌರವವನ್ನು ಪ್ರೀತಿಪೂರ್ವಕವಾಗಿ ನೀಡಿದ ಮೈಸೂರು ವಿವಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ ಈ ಮಾಹಿತಿ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ..