Advertisements

ಸೈಮಾ ಆವಾರ್ಡ್ಸ್ ಕಾರ್ಯಕ್ರಮಕ್ಕೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿ ಹೇಗಿತ್ತು ಗೊತ್ತಾ? ನೋಡಿ..

Kannada News

ದಕ್ಷಿಣ ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ಕೊಡಲಾಗುವ ಪ್ರತಿಷ್ಠಿತ ಸೈಮಾ ಅವಾರ್ಡ್ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ನಿನ್ನೆ ಮತ್ತು ಇಂದು ಎರಡು ದಿನಗಳು ಜಯಮಹಲ್ ಪ್ಯಾಲೇಸ್‍ ನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮವು ಕರ್ನಾಟರ ರತ್ನ ಅಪ್ಪು ಹೆಸರಲ್ಲಿ ನಡೆಯುತ್ತಿರುವುದು ವಿಶೇಷ ಎನ್ನಬಹುದು. 2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ.

ನಿನ್ನೆ (ಸೆಪ್ಟೆಂಬರ್ 10) ಹಾಗೂ ಇಂದು (ಸೆಪ್ಟೆಂಬರ್ 11) ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಚಂದನವನದ ರಾಕಿಂಗ್ ಸ್ಟಾರ್ ಯಶ್, ತೆಲುಗು ಚಿತ್ರರಂಗದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ವಿಜಯ ದೇವರಕೊಂಡ, ತಮಿಳು ಚಿತ್ರರಂಗದ ಉಳಗನಾಯಗನ್ ಕಮಲ್ ಹಾಸನ್ ಮತ್ತು ಹಿಂದಿ ಚಿತ್ರರಂಗದ ನಟ ರಣವೀರ್ ಸಿಂಗ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ. ಅಷ್ಟೇ ಅಲ್ಲದೇ ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಎಂಟ್ರಿ ಹೇಗಿತ್ತು ಗೊತ್ತಾ ಎಂದು ತಿಳಿಯಲು ಈ ಕೆಳಗಿನ ಮಾಹಿತಿ ಓದಿ.

Advertisements
Advertisements

ಈ ಬಾರಿಯ ಸೈಮಾ ಪ್ರಶಸ್ತಿಯಲ್ಲಿ ಕನ್ನಡದ ಪರ ರಾಬರ್ಟ್ 10 ವಿಭಾಗಗಳಲ್ಲಿ ನಾಮಿನೇಟ್ ಆಗಿ ಅತಿ ಹೆಚ್ಚು ವಿಭಾಗಗಳಲ್ಲಿ ನಾಮಿನೇಟ್ ಆದ ಸ್ಯಾಂಡಲ್ ವುಡ್ ಸಿನಿಮಾ ಎನ್ನುವ ಹೆಗ್ಗಳಿಕೆ ಪಾತ್ರವಾಗಿತ್ತು. ಅದಲ್ಲದೆ, ರಾಜ್ ಬಿ ಶೆಟ್ಟಿ ನಿರ್ದೇಶನದ ಸೂಪರ್ ಹಿಟ್ ಚಿತ್ರ ಗರುಡಗಮನ ವೃಷಭವಾಹನ 8 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರ 7 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಹೀಗೆ ಈ 3 ಚಿತ್ರಗಳ ನಡುವೆ ಈ ಬಾರಿಯ ಸೈಮಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಪೈಪೋಟಿ ಇದ್ದು, ಪ್ರಶಸ್ತಿಯೂ ಯಾರ ಪಾಲಾಗಲಿದೆ ಎನ್ನುವ ಕುತೂಹಲವು ಸಹಜವಾಗಿಯೇ ಇತ್ತು.

ಆದರೆ ನಿನ್ನೆ ಪ್ರಶಸ್ತಿಯನ್ನು ನೀಡಲಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಈ ಬಾರಿಯ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡದ ಪರ ಮೊದಲನೇ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ.ಅದರ ಜೊತೆಗೆ ಹತ್ತು ವಿಭಾಗಗಳಲ್ಲಿ ನಾಮಿನೇಟ್ ಆಗಿದ್ದ ರಾಬರ್ಟ್ ಚಿತ್ರದ ಛಾಯಾಗ್ರಾಹಕ ಸುಧಾಕರ್ ರಾಜ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ರಾಬರ್ಟ್ ಚಿತ್ರದಲ್ಲಿನ ತನ್ನ ಅದ್ಭುತ ಕ್ಯಾಮೆರಾ ಕೈಚಳಕಕ್ಕೆ ಸುಧಾಕರ್ ರಾಜ್ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಸೈಮಾ ಕಾರ್ಯಕ್ರಮದಲ್ಲಿ ಕನ್ನಡದ ಎರಡನೇ ಪ್ರಶಸ್ತಿ ಕೂಡ ಘೋಷಣೆಗೊಂಡಿದೆ. ನಿನ್ನ ಸನಿಹಕೆ ಚಿತ್ರದ ನೀ ಪರಿಚಯ ಹಾಡನ್ನು ಹಾಡಿದ್ದ ಗಾಯಕ ವಾಸುಕಿ ವೈಭವ್ ಕನ್ನಡ ವಿಭಾಗದ ಅತ್ಯುತ್ತಮ ಮೇಲ್ ಸಿಂಗರ್ ಪ್ರಶಸ್ತಿಯೂ ದೊರೆತಿದೆ. ಅದರ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಯುವರತ್ನ ಸಿನಿಮಾಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯೂ ದೊರೆತಿದೆ. ಹೀಗೆ ಸಾಕಷ್ಟು ಪ್ರಶಸ್ತಿಗಳು ಕನ್ನಡ ಸಿನಿಮಾರಂಗದವರಿಗೆ ದೊರೆತಿದೆ. ಅದಲ್ಲದೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸೈಮಾ ಅವಾರ್ಡ್ ಕಾರ್ಯಕ್ರಮಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಅಭಿಷೇಕ್ ಅಂಬರೀಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜೊತೆಯಾಗಿಯೇ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ಹೇಗೆ ಬಂದಿದ್ದರು ಎಂದು ನೋಡಲು ಈ ಕೆಳಗಿನ ವಿಡಿಯೋ ನೋಡಿ.